September 26, 2026

ಕಾರವಾರ: ವಿಷ ಸೇವಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

0
image_editor_output_image-1853205935-1678956812927.jpg

ಕಾರವಾರ: ವಿಷ ಸೇವಿಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನಲ್ಲಿ ನಡೆದಿದೆ.

ಬೆಳಂಬರದ ತಾಳೇಬೈಲಿ ಗ್ರಾಮದ ಶಿಲ್ಪ ಗೌಡ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಈಕೆ ಅಂಕೋಲ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು.

 

ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!