ಭಾರಿ ಮಳೆಯಿಂದ ಕುಸಿದು ಬಿದ್ದ ಮೂರು ಅಂತಸ್ತಿನ ಕಟ್ಟಡ:
ಇಬ್ಬರು ಮಕ್ಕಳು ಮೃತ್ಯು, ಹಲವರು ಗಾಯ
ಆಂಧ್ರಪ್ರದೇಶ: ಭಾರಿ ಮಳೆಯ ಪರಿಣಾಮ ಮೂರು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ಅನಂತಪುರ ಜಿಲ್ಲೆಯ ಕದಿರಿ ಪಟ್ಟಣದಲ್ಲಿ ನಡೆದಿದೆ.
ಶನಿವಾರ ಮುಂಜಾನೆ 3 ಗಂಟೆಯ ಸುಮಾರಿಗೆ ಮೂರು ಅಂತಸ್ತಿನ ಕಟ್ಟಡ ಕುಸಿದ್ದಿದ್ದು, ಇದರ ಪರಿಣಾಮ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಟ್ಟಡ ಕುಸಿದ ಸದ್ದು ಕೇಳಿ ಬಂದ ಅಕ್ಕಪಕ್ಕದ ನಿವಾಸಿಗಳು, ಅವಶೇಷಗಳಡಿ ಸಿಲುಕಿದ್ದ ಆರಕ್ಕೂ ಅಧಿಕ ಜನರನ್ನು ರಕ್ಷಿಸಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಅಧಿಕಾರಿಗಳು, ರಕ್ಷಣಾ ಹಾಗೂ ಪರಿಹಾರ ತಂಡದ ಸದಸ್ಯರು, ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ರಕ್ಷಿಸಿದ್ದಾರೆ.





