February 4, 2026

ಉಡುಪಿ: ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ 24ಕ್ಕೂ ಅಧಿಕ ಆರೋಪಿಗಳು ಅರೆಸ್ಟ್

0
IMG-20230316-WA0012.jpg

ಉಡುಪಿ: ಜಿಲ್ಲೆಯ ಬೇರೆ ಬೇರೆ ಠಾಣೆಗಳಲ್ಲಿ ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ಹಲವಾರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಪತ್ತೆಹಚ್ಚಿವಲ್ಲಿ ಯಶಸ್ವಿಯಾಗಿದ್ದಾರೆ.

ಪತ್ತೆ ಹಚ್ಚುವ ಸಲುವಾಗಿ ವಿಶೇಷ ತಂಡಗಳನ್ನು ರಚಿಸಿದ್ದು, ಆ ತಂಡಗಳು ಕಳೆದ 15 ದಿನಗಳಿಂದ ಹೊರಜಿಲ್ಲೆ, ಹೊರರಾಜ್ಯಗಳಲ್ಲಿ ಸಂಚರಿಸಿ ಒಟ್ಟು 24ಕ್ಕೂ ಅಧಿಕ ಸಂಖ್ಯೆಯ ಆಸಾಮಿಗಳನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.

ಆ ಪೈಕಿ ಭಾರತ – ನೇಪಾಳ ಗಡಿ ಪ್ರದೇಶ – 01, ಮಧ್ಯಪ್ರದೇಶ – 01, ಕೇರಳ – 03, ಹೊರಜಿಲ್ಲೆಗಳಲ್ಲಿ – 04 ಹಾಗೂ ಉಳಿದವರನ್ನು ಉಡುಪಿ ಜಿಲ್ಲೆಯಲ್ಲಿ ಪತ್ತೆ ಹಚ್ಚಲಾಗಿದೆ.

ಇನ್ನು ತಲೆಮರೆಸಿಕೊಂಡವರ ಪೈಕಿ ದರೋಡೆ, ಸರಕಾರಿ ನೌಕರರ ಮೇಲೆ ಹಲ್ಲೆ, ಕಳವು, ಅಪಹರಣ, ಬಲದ್ಘ್ರಹಣ (ಒತ್ತಾಯ ಪೂರ್ವಕವಾಗಿ ಸುಲಿಗೆ), ಅತ್ಯಾಚಾರ, ಮಾರಣಾಂತಿಕ ರಸ್ತೆ ಅಪಘಾತ ಹಾಗೂ ಚೆಕ್‌ ಅಮಾನ್ಯ ಪ್ರಕರಣಗಳಲ್ಲಿ ಒಳಗೊಂಡ ಆರೋಪಿಗಳಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!