February 4, 2026

ನಾನು ಎಲ್ಲಿಯೂ ಗುಳಿಗದ ಬಗ್ಗೆ ಟೀಕೆ ಮಾಡಿಲ್ಲ: ಸ್ಪಷ್ಟನೆ ನೀಡಿದ ಸಚಿವ ಆರಗ ಜ್ಞಾನೇಂದ್ರ

0
araga-jnanendra-dh-1138636-1661270895.jpg

ಶಿವಮೊಗ್ಗ: ನಾನು ಎಲ್ಲಿಯೂ ಗುಳಿಗದ ಬಗ್ಗೆ ಟೀಕೆ ಮಾಡಿಲ್ಲ. ಗುಳಿಗ ಬೋರ್ಡ್ ಹಾಕಿಕೊಂಡು ಜನರ ಶ್ರದ್ಧೆ ಕಾಂಗ್ರೆಸ್ ದುರುಪಯೋಗ ಮಾಡಿಕೊಂಡಿದೆ ಎನ್ನುವ ಹಿನ್ನಲೆಯಲ್ಲಿ ನಾನು ಹೇಳಿದ್ದೆ ಅಷ್ಟೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ.

ಕರಾವಳಿಯ ಆರಾಧ್ಯ ದೈವ ಗುಳಿಗದ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅಪಮಾನ ಮಾಡಿದ್ದಾರೆಂಬ ವಿಚಾರದ ಬಗ್ಗೆ ಭಾರೀ ಟೀಕೆ ಎದುರಾಗುತ್ತಿದ್ದು, ಈ ಕುರಿತು ಪ್ರತಿಕ್ತಿಯಿಸಿದ ಅವರು, ನನಗೆ ಗುಳಿಗ, ಪಂಜುರ್ಲಿ ಕುರಿತು ಗೌರವ ಭಕ್ತಿಯಿದೆ. ನಿನ್ನೆ ಕೂಡ ಒಂದು ಕಾರ್ಯಕ್ರಮಕ್ಕೆ ಹೋಗಿ ಬಂದಿದ್ದೇನೆ. ಯಾರಿಗೆ ಈ ದೈವದ ಬಗ್ಗೆ ನಂಬಿಕೆಯಿಲ್ಲ, ವಿಶ್ವಾಸ ಇಲ್ಲ, ಮೂಢನಂಬಿಕೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದವರು ನಿನ್ನೆ ತೀರ್ಥಹಳ್ಳಿಯಲ್ಲಿ ನಾಟಕವಾಡಿಸಿದ್ದಾರೆ. ಚುನಾವಣೆ ಸಮಯದಲ್ಲಿ ಜನರ ಭಾವನೆಗಳನ್ನು ರಾಜಕಾರಣಕ್ಕೆ ಕಾಂಗ್ರೆಸ್ ದುರುಪಯೋಗ ಮಾಡಿದ್ದಾರೆ ಎಂದು ನಾನು ಹೇಳಿದ್ದು ಎಂದರು.

ಇನ್ನು ನಾನು ಎಲ್ಲಿಯೂ ಗುಳಿಗದ ಬಗ್ಗೆ ಟೀಕೆ ಮಾಡಿಲ್ಲ. ಗುಳಿಗ ಬೋರ್ಡ್ ಹಾಕಿಕೊಂಡು ಜನರ ಶ್ರದ್ಧೆ ಕಾಂಗ್ರೆಸ್ ದುರುಪಯೋಗ ಮಾಡಿಕೊಂಡಿದೆ ಎನ್ನುವ ಹಿನ್ನಲೆಯಲ್ಲಿ ನಾನು ಹೇಳಿದ್ದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!