May 14, 2026

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಸಮೀಪದ ಪಾಟ್ರಕೋಡಿ ನಿವಾಸಿ ಮೃತ್ಯು

0
IMG-20230317-WA0029.jpg

ವಿಟ್ಲ: ಬೈಕ್ ಅಪಘಾತದ ಗಾಯಾಳು ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಬುಡೋಳಿಯಲ್ಲಿ ನಡೆದಿದೆ.

ಬುಡೋಳಿ ಪಾಟ್ರಕೋಡು ನಿವಾಸಿ ಫಾರೂಕ್(35) ಮೃತಪಟ್ಟ ವ್ಯಕ್ತಿ.

ಇವರಿಗೆ 10 ವರ್ಷಗಳ ಹಿಂದೆ ವಿವಾಹವಾಗಿದ್ದು, ಮಕ್ಕಳಾಗಿರಲಿಲ್ಲ. 10 ವರ್ಷಗಳ ಬಳಿಕ ಮೊನ್ನೆಯಷ್ಠೇ ಅವರ ಪತ್ನಿಗೆ ಹೆರಿಗೆಯಾಗಿತ್ತು. ಫಾರೂಕ್ ಮಗುವನ್ನು ನೋಡಲು ದೇರಳಕಟ್ಟೆಯ ಆಸ್ಪತ್ರೆಗೆ ತೆರಳುವಾಗ ದೇರಳಕಟ್ಟೆ ಆಸ್ಪತ್ರೆಯ ಬಳಿಯೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರು ಇಂದು ಮೃತಪಟ್ಟಿದ್ದಾರೆ. ಫಾರೂಕ್ ನಿಧನದಿಂದ ಕುಟುಂಬದ ರೋಧನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!