May 28, 2026

ಮಂಗಳೂರು: ದುಬೈನಿಂದ ಅಕ್ರಮವಾಗಿ ಕಳ್ಳಸಾಗಾಣಿಕೆ: 90 ಲಕ್ಷ ರೂ. ಮೌಲ್ಯದ ಚಿನ್ನ ವಶ

0
image_editor_output_image-1942579006-1679123521780.jpg

ಮಂಗಳೂರು: ದುಬೈನಿಂದ ಬಂದಿಳಿದ ಪ್ರಯಾಣಿಕರು ಅಕ್ರಮವಾಗಿ ಕಳ್ಳಸಾಗಾಣಿಕೆ ಮಾಡಲು ಯತ್ನಿಸಲಾಗುತ್ತಿದ್ದ ಸುಮಾರು 90 ಲಕ್ಷ ರೂ.ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

2023 ರ ಮಾರ್ಚ್ 1 ರಿಂದ 15 ರ ಅವಧಿಯಲ್ಲಿ ದುಬೈನಿಂದ ಬಂದ ಒಂದು ಹೆಣ್ಣು ಮಗು ಸೇರಿದಂತೆ ಮೂವರು ಪ್ರಯಾಣಿಕರಿಂದ 90,67,750 ರೂಪಾಯಿ ಮೌಲ್ಯದ 1,606 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಓರ್ವ ಪುರುಷ ಪ್ರಯಾಣಿಕ ತಾನು ಧರಿಸಿದ್ದ ಪ್ಯಾಂಟ್‌ನ ಸೊಂಟದ ಬ್ಯಾಂಡ್‌ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನ ಬಚ್ಚಿಟ್ಟು ಕಳ್ಳಸಾಗಣೆ ಮಾಡಿದ್ದಾನೆ.

ಮಗುವಿನ ತಂದೆ ತನ್ನ ಗುದನಾಳದಲ್ಲಿ ಚಿನ್ನವನ್ನು ಬಚ್ಚಿಟ್ಟುಕೊಂಡಿದ್ದನು. ಈ ಬಗ್ಗೆ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!