ಶಿವಮೊಗ್ಗ: ಮಹಿಳೆಯರ ನೈಟ್ ಪಾರ್ಟಿಗೆ ಬಜರಂಗದಳ ಕಾರ್ಯಕರ್ತರಿಂದ ದಾಳಿ
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತರು ಮಹಿಳೆಯರ ನೈಟ್ ಪಾರ್ಟಿ ನಡೆಯುತ್ತಿದ್ದ ಹೊಟೇಲ್ ಮೇಲೆ ದಾಳಿ ನಡೆಸಿ, ಪಾರ್ಟಿ ನಿಲ್ಲಿಸುವಂತೆ ಎಚ್ಚರಿಕೆ ನೀಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಶುಕ್ರವಾರ ತಡರಾತ್ರಿ ನಡೆದಿದೆ ಎನ್ನಲಾದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಕುವೆಂಪು ರಸ್ತೆಯ ಹೊಟೇಲ್ ಒಂದರಲ್ಲಿ ಶುಕ್ರವಾರ ತಡರಾತ್ರಿ ಲೇಡಿಸ್ ಪಾರ್ಟಿ ನಡೆಯುತ್ತಿತ್ತು ಎನ್ನಲಾಗಿದೆ.




