ವಿಧಾನ ಪರಿಷತ್ ಚುನಾವಣೆ:
ದಕ್ಷಿಣ ಕನ್ನಡದಿಂದ ಕೋಟಾ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ
ಮಂಗಳೂರು: ಕರ್ನಾಟಕ ವಿಧಾನ ಪರಿಷತ್ ಗೆ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಚುನಾವಣೆಗೆ
ನಗರದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಸಭಾಂಗಣದಲ್ಲಿ ನ.20ರ ಶನಿವಾರ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರಿಗೆ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವರಾದ ಸುನೀಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಇಲಾಖೆಯ ಸಚಿವರಾದ ಎಸ್. ಅಂಗಾರ ಹಾಗೂ ಮುಖಂಡರು ಈ ಸಂದರ್ಭದಲ್ಲಿದ್ದರು.





