February 3, 2026

ಕಾಲೇಜಿನ ಟೆರೇಸ್ ನಲ್ಲಿ Instagram Reel’s ಮಾಡುತ್ತಿದ್ದಾಗ ಆಯತಪ್ಪಿ ಬಿದ್ದು ವಿದ್ಯಾರ್ಥಿ ಮೃತ್ಯು

0
image_editor_output_image1040561368-1679292242067.jpg

ಬಿಲಾಸಪುರ್‌: ವಿದ್ಯಾರ್ಥಿಯೊಬ್ಬ ಸ್ನೇಹಿತರೊಂದಿಗೆ ಇನ್‌ಸ್ಟಾಗ್ರಾಂ ರೀಲ್ಸ್ ಮಾಡಲು ಹೋಗಿ ಕಾಲೇಜಿನ ಟೆರೇಸ್ ಮೇಲಿಂದ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ಛತ್ತೀಸಗಢದ ಬಿಲಾಸಪುರ ಪಟ್ಟಣದಲ್ಲಿ ನಡೆದಿದೆ.

ಬಿಲಾಸಪುರದ ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಥಮ ಬಿಎಸ್‌ಸಿ ವಿದ್ಯಾರ್ಥಿ ಅಶುತೋಷ್‌ ಸಾವೊ (20) ಮೃತ ವಿದ್ಯಾರ್ಥಿ.

ಈತ ಶುಕ್ರವಾರ ಮಧ್ಯಾಹ್ನ ವೇಳೆಗೆ ರೀಲ್ಸ್ ಮಾಡಲೆಂದು ಐವರು ಸ್ನೇಹಿತರೊಂದಿಗೆ ಕಾಲೇಜಿನ ಟೆರೇಸ್‌ಗೆ ತೆರಳಿದ್ದಾನೆ.

ಟೆರೇಸ್‌ನ ಗೋಡೆ ಮೇಲೆ ನಿಂತು ಕಿಟಕಿಯ ಸಜ್ಜೆ ಮೇಲೆ ಹಾರಿದ್ದಾನೆ. ಈ ವೇಳೆ 20 ಅಡಿ ಎತ್ತರದ ಕಟ್ಟಡದಿಂದ ಆಯತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಕೈಗೆತ್ತಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!