September 26, 2026

ಊಟ, ತಿಂಡಿ ಸರಿಯಾಗಿ ಮಾಡದ ಪತ್ನಿಯನ್ನು ಮಚ್ಚಿನಿಂದ ಕೊಲೆಗೈದ ಪತಿ

0
image_editor_output_image300397590-1679294184132.jpg

ಚಾಮರಾಜನಗರ: ಕ್ಷುಲ್ಲಕ ವಿಚಾರಕ್ಕೆ ಪತ್ನಿಯನ್ನು ಪತಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಸೋಮವಾರ ಬೆಳಗಿನ ಜಾವ ನಡೆದಿದೆ.

ಕೊತ್ತಲವಾಡಿ ಗ್ರಾಮದ ಕೆ.ಎನ್‌.ರತ್ನಮ್ಮ(30) ಮೃತರು. ಮಹೇಶ್ (41) ಕೊಲೆ ಆರೋಪಿ. ತಾನು ಕೃತ್ಯ ಎಸಗಿರುವುದಾಗಿ ಆರೋಪಿ ಗ್ರಾಮಸ್ಥರ ಮುಂದೆ ಹೇಳಿಕೊಂಡಿದ್ದಾನೆ.

 

ಪತ್ನಿ ಊಟ, ತಿಂಡಿ ಸರಿಯಾಗಿ ಮಾಡುತ್ತಿರಲಿಲ್ಲ. ನನ್ನ ಜೊತೆ ಸರಿಯಾಗಿ ಮಾತನಾಡುತ್ತಿರಲಿಲ್ಲ. ಇದಕ್ಕಾಗಿ ಪದೇ ಪದೇ ಜಗಳ ಆಗುತ್ತಿತ್ತು. ಭಾನುವಾರ ರಾತ್ರಿಯೂ ಊಟದ ವಿಚಾರಕ್ಕೆ ಜಗಳ ನಡೆದು ಕೊಲೆ ಮಾಡಿರುವುದಾಗಿ ಆರೋಪಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!