March 12, 2026

ಮಂಗಳೂರು: ರೈಲು ಬೋಗಿಯ ಶೌಚಾಲಯದಲ್ಲಿ ವ್ಯಕ್ತಿ ಆತ್ಮಹತ್ಯೆ

0
IMG-20230321-WA0001.jpg

ಮಂಗಳೂರು: ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣದಲ್ಲಿ ನಿಂತಿದ್ದ ರೈಲುಗಾಡಿಯ ಡಿ3 ಬೋಗಿಯ ಶೌಚಾಲಯದಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಭಾನುವಾರ ಪತ್ತೆಯಾಗಿದೆ.

ಮೃತ ವ್ಯಕ್ತಿ 40-45 ವರ್ಷ ಪ್ರಾಯದವರಾಗಿದ್ದು, 5.5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದಾರೆ. ಸಿಮೆಂಟ್‌ ಬಣ್ಣದ ಜರ್ಸಿ, ಕೇಸರಿ ಬಣ್ಣದ ಟಿ-ಶರ್ಟ್‌ ಮತ್ತು ಕಪ್ಪು ಬಣ್ಣದ ಪ್ಯಾಂಟ್‌ ಅದರೊಳಗೆ ಕಪ್ಪು ಬಣ್ಣದ ಮಾಸಲು ಪ್ಯಾಂಟ್‌ ಧರಿಸಿದ್ದು, ಕುತ್ತಿಗೆಯಲ್ಲಿ ಮಣಿ ಸರವಿದೆ.

ಇನ್ನು ಈ ಕುರಿತು ಮಂಗಳೂರು ರೈಲ್ವೇ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಾರಸುದಾರರು ಇದ್ದಲ್ಲಿ ಠಾಣೆಯನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!