ಮಂಗಳೂರು: ಬಾಲಕಿಯ ಮೇಲೆ ಅತ್ಯಾಚಾರ: ಆರೋಪಿ ಬಸ್ ಚಾಲಕನಿಗೆ 20 ವರ್ಷ ಜೈಲು ಶಿಕ್ಷೆ
ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅತ್ಯಾಚಾರ ಎಸಗಿದ ಆರೋಪಿಗೆ ಮಂಗಳೂರಿನ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಕಾವೂರು ಸಮೀಪದ ಮರಕಡ ನಿವಾಸಿ, ಬಸ್ ಚಾಲಕ ದಯಾನಂದ ದಾನಣ್ಣನವರ್ (30) ಶಿಕ್ಷೆಗೊಳಗಾದವನಾಗಿದ್ದಾನೆ.
ಆರೋಪಿಯು 13 ವರ್ಷದ ವಿದ್ಯಾರ್ಥಿನಿಯೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ. 2022ರ ಜ. 27ರಂದು ಹೊರಗಡೆ ತಿರುಗಾಡುವುದಕ್ಕೆ ಬರುವಂತೆ ಸಂದೇಶ ಕಳುಹಿಸಿದ್ದ.
ಇದಕ್ಕೆ ಬಾಲಕಿಯು ನಿರಾಕರಿಸಿದ್ದಳು. ಆದರೂ ಆಕೆಯನ್ನು ಒತ್ತಾಯ ಮಾಡಿ ಪುಸಲಾಯಿಸಿ ಜ.28ರಂದು ಆಟೋರಿಕ್ಷಾದರಲ್ಲಿ ನಗರದ ಹಂಪನಕಟ್ಟೆಗೆ ಕರೆದೊಯ್ದು ಲಾಡ್ಜ್‌ನಲ್ಲಿ ಅತ್ಯಾಚಾರವೆಸಗಿದ್ದ ಎಂದು ಆರೋಪಿಸಲಾಗಿತ್ತು.




