February 4, 2026

ಮುಂಬೈನಿಂದ ತರುತ್ತಿದ್ದ 4 ಕೆ.ಜಿ. ತೂಕದ ಚಿನ್ನಾಭರಣಗಳನ್ನು ಚೆಕ್‌ಪೋಸ್ಟ್ ನಲ್ಲಿ ಜಪ್ತಿ ಮಾಡಿದ ಪೊಲೀಸರು

0
image_editor_output_image-1147664788-1679478976737.jpg

ಗದಗ: ಚುನಾವಣೆ ಹೊತ್ತಿನಲ್ಲಿ ಗದಗ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆಗೆ ಇಳಿದಿದ್ದು, ಚಿನ್ನದ ಬೇಟೆಯಾಡಿದ್ದಾರೆ.

ಮುಂಬೈನಿಂದ ಗದಗ ನಗರಕ್ಕೆ ತರುತ್ತಿದ್ದ 4 ಕೆಜಿ ತೂಕದ ಚಿನ್ನಾಭರಣಗಳನ್ನು ನಗರದ ಹೊರವಲಯದ ಚೆಕ್‌ಪೋಸ್ಟ್ ನಲ್ಲಿ ಪೊಲೀಸರು ಜಪ್ತಿ ಮಾಡಿದ್ದಾರೆ.

ಜಿಲ್ಲಾಧಿಕಾರಿ ಎಮ್.ಎಲ್ ವೈಶಾಲಿ, ಎಸ್ಪಿ ಬಿ.ಎಸ್ ನೇಮಗೌಡ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ ಚಿನ್ನಾಭರಣಗಳನ್ನ ವಶಕ್ಕೆ ಪಡೆಯಲಾಗಿದೆ.

ಮಹಿಪಾಲ್ ಜೈನ್, ಅಭಿಷೇಕ್ ಜೈನ್ ಎಂಬವರಿಗೆ ಸೇರಿದ ಚಿನ್ನಾಭರಣಗಳು ಇದಾಗಿದ್ದು, ಸುಮಾರು 1.75 ಕೋಟಿ ರೂ. ಮೌಲ್ಯದ್ದಾಗಿದೆ. ಸದ್ಯ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!