March 22, 2026

ತಮಿಳುನಾಡಿನ ಪಟಾಕಿ ಗೋದಾಮಿನಲ್ಲಿ ಸ್ಪೋಟ: 7 ಮಂದಿ ಮೃತ್ಯು, ಹಲವರಿಗೆ ಗಂಭೀರ ಗಾಯ
 

0
ms-231122-thamil.jpg

ಕಾಂಚಿಪುರಂ: ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಕುರುವಿಮಲೈ ಗ್ರಾಮದಲ್ಲಿ ಇಂದು ಮಧ್ಯಾಹ್ನ ಪಟಾಕಿ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಇಬ್ಬರು ಮಹಿಳೆಯರು ಸೇರಿದಂತೆ 7 ಮಂದಿ ಮೃತಪಟ್ಟಿದ್ದಾರೆ.

ಖಾಸಗಿ ಪಟಾಕಿ ಗೋದಾಮಿನ 30 ಕಾರ್ಮಿಕರು ಕೆಲಸದಲ್ಲಿ ತೊಡಗಿದ್ದಾಗ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಘಟನೆಯಲ್ಲಿ 13 ಮಂದಿ ಗಾಯಗೊಂಡಿದ್ದು ಇವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ.

ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಗೋದಾಮಿನ ಮಾಲೀಕರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!