March 22, 2026

ರಾಜ್ಯ ಹೆದ್ದಾರಿಯಲ್ಲಿ ಅಪರಿಚಿತ ವಾಹನ ಢಿಕ್ಕಿ: ಬೈಕ್ ಸವಾರರಿಬ್ಬರು ಮೃತ್ಯು

0
image_editor_output_image-310278898-1679495360161.jpg

ಕುಣಿಗಲ್: ಪಟ್ಟಣದ ರಾಜ್ಯ ಹೆದ್ದಾರಿ 33ರಲ್ಲಿ ಮಂಗಳವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.

ಮೃತರನ್ನು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೊನಿಯ ಚೇತನ್ (38), ಕೋಟೆ ಪ್ರದೇಶದ ಕಿರಣ್ (20)ಎಂದು ಗುರುತಿಸಲಾಗಿದೆ.

ಇಬ್ಬರು ಹುಲಿಯೂರುದುರ್ಗದ ಕಡೆ ಹೋಗುವಾಗ ಎದುರುಗಡೆಯಿಂದ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಚೇತನ್ ಸ್ಥಳದಲ್ಲಿ ಮೃತಪಟ್ಟಿದ್ದು, ತೀವ್ರವಾಗಿ ಗಾಯಗೊಂಡಿದ್ದ ಕಿರಣ್ ಚುಂಚನಗಿರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ‌.

Leave a Reply

Your email address will not be published. Required fields are marked *

error: Content is protected !!