February 3, 2026

ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ಹಣ ವಶಕ್ಕೆ ಪಡೆದ ಚೆಕ್ ಪೋಸ್ಟ್ ಅಧಿಕಾರಿಗಳು

0
image_editor_output_image-1562942030-1679526763231.jpg

ಕಲಬುರಗಿ: ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್ ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು ₹ 1.90 ಕೋಟಿ ಹಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.‌ ಗುರುಕರ್ ತಿಳಿಸಿದ್ದಾರೆ.

ಇದರಲ್ಲಿ ಕಮಲಾಪುರ ತಾಲ್ಲೂಕಿನ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ ₹ 1.40 ಕೋಟಿ, ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ ₹ 50 ಲಕ್ಷ ವಶಕ್ಕೆ ಪಡೆಯಲಾಗಿದೆ.

ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ‌ ಮಾಡುವಲ್ಲಿ ನಿರತವಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!