ಪರಿಷತ್ ಸದಸ್ಯ, BJP ಮುಖಂಡ ಬಾಬುರಾವ್ ಚಿಂಚನಸೂರ್ ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು :ಮೂರು ವರ್ಷಗಳ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಮರಳಿದ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಮುಂಬರುವ ದಿನಗಳಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿಯೇ ಭಾರಿ ಅಸಮಾಧಾನವನ್ನು ಎದುರಿಸಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.
2019ರ ಲೋಕಸಭೆ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರ ಸೋಲಿಗೆ ಪ್ರಮುಖ ಕಾರಣರಾದ ಬಾಬುರಾವ್ ಚಿಂಚನಸೂರ್ ಇಂದು ಮರಳಿ ಪಕ್ಷಕ್ಕೆ ಸೇರ್ಪಡೆಯಾದರೂ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಭೇಟಿಗೆ ಅವಕಾಶ ನೀಡಿಲ್ಲ.
ಸದಾಶಿವ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾದ ಚಿಂಚನಸೂರ್ ಈ ಸಂದರ್ಭ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರ ಗುಣಗಾನ ಮಾಡಿದ್ದಾರೆ.




