ಮಾಣಿ: ಕಾರು-ಬೈಕ್ ನಡುವೆ ಭೀಕರ ಅಪಘಾತ:
ಬೈಕ್ ಸವಾರ ಗಂಭೀರ
ವಿಟ್ಲ: ಇನ್ನೋವಾ ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿಯ ಹಳೀರ ಎಂಬಲ್ಲಿ ನಡೆದಿದೆ.
ಬುಡೋಳಿ ನಿವಾಸಿ ಪ್ರವೀಣ್ ಗಾಯಗೊಂಡ ಬೈಕ್ ಸವಾರ ಎಂದು ಗುರುತಿಸಲಾಗಿದೆ.
ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿಯ ಹಳೀರ ಎಂಬಲ್ಲಿ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಸವಾರನನ್ನು ಸೋಶಿಯಲ್ ಇಕ್ವ ಆಂಬ್ಯುಲೆನ್ಸ್ ಮೂಲಕ ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.





