February 3, 2026

ಮಡಿಕೇರಿ: ಉಂಗುರ ನುಂಗಿ 8 ತಿಂಗಳ ಮಗು ಮೃತ್ಯು

0
image_editor_output_image543013685-1679559878045.jpg

ಮಡಿಕೇರಿ,ಮಾ.23: ಉಂಗುರ ನುಂಗಿದ ಪರಿಣಾಮ ಎಂಟು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದ ಮುನೀರ್ ಎಂಬವರ ಮಗು ಬುಧವಾರ ರಾತ್ರಿ ನಡೆದಿದೆ.

ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿತ್ತು. ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದರೂ ತೀವೃ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ತಿಳಿದು ಬಂದಿದೆ.

ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಯಿತಾದರೂ ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗಿನ ಜಾವ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!