February 3, 2026

ಕರ್ನಾಟಕ ಪ್ರಾಂತ ರೈತ ಕಾರ್ಮಿಕ ರಕ್ಷಣಾ ವೇದಿಕೆಯ ದ.ಕ. ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ಇಲ್ಯಾಸ್ ಆಯ್ಕೆ

0
IMG-20211120-WA0020.jpg

ಮಂಗಳೂರು: ಕರ್ನಾಟಕ ಪ್ರಾಂತ ರೈತ ಕಾರ್ಮಿಕ ರಕ್ಷಣಾ ವೇದಿಕೆಯ ದ.ಕ. ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್ ಇಲ್ಯಾಸ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ಕೊಡಗು ಜಿಲ್ಲೆಯ ಸಿದ್ದಾಪುರದಲ್ಲಿ ಕರ್ನಾಟಕ ಪ್ರಾಂತ ರೈತ ಕಾರ್ಮಿಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಜೆ. ಜವರೇ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಮೊಹಮ್ಮದ್ ಇಲ್ಯಾಸ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್ ದೇವರಾಜು, ಗೌರವಾಧ್ಯಕ್ಷೆ ನಳಿನಾ ಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ, ಕೊಡಗು ಜಿಲ್ಲಾಧ್ಯಕ್ಷ ಕೆ.ಕೆ.ಶಶಿಕುಮಾರ್, ರಾಜ್ಯ ಉಪಾಧ್ಯಕ್ಷೆ ಕೆ.ಟಿ.ಸುನಿತಾ, ಕೊಡಗು ಜಿಲ್ಲಾ ಉಪಾಧ್ಯಕ್ಷ ಹರೀಶ್, ಪ್ರಧಾನ ಕಾರ್ಯದರ್ಶಿ ವಿನೋದ್ ಎಂ.ಡಿ, ಕೊಡಗು ಜಿಲ್ಲಾ ಮಹಿಳಾ ಅಧ್ಯಕ್ಷೆ ಪಡಿಕ್ಕಲ್ ಕುಸುಮಾವತಿ ಚಂದ್ರಶೇಖರ, ಬೆಂಗಳೂರು ನಗರಾಧ್ಯಕ್ಷ ರವಿ ಕುಮಾರ್, ಸೋಮವಾರ ಪೇಟೆ ತಾಲೂಕು ಮಹಿಳಾ ಅಧ್ಯಕ್ಷೆ ಪೂರ್ಣಿಮಾ ಎ, ವಿರಾಜಪೇಟೆ ತಾಲ್ಲೂಕು ಅಧ್ಯಕ್ಷ ಪ್ರದೀಪ್, ಉಪಾಧ್ಯಕ್ಷ ಸುನಿಲ್, ವಿರಾಜಪೇಟೆ ತಾಲ್ಲೂಕು ಮಹಿಳಾ ಅಧ್ಯಕ್ಷೆ ಮಂಜುಳಾ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!