February 2, 2026

ವಯನಾಡು ಸಂಸದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿ: ಲೋಕಸಭೆ ಸಚಿವಾಲಯ ಅಧಿಸೂಚನೆ

0
image_editor_output_image-1243198147-1679648769909.jpg

ನವದೆಹಲಿ: ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ವಯನಾಡು ಸಂಸದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಶುಕ್ರವಾರ ಹೊರಡಿಸಿದೆ.

ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ಅವರಿಗೆ ಗುಜರಾತ್‌ನ ನ್ಯಾಯಾಲಯವು 2019ರಲ್ಲಿ ದಾಖಲಾದ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಲೋಕಸಭೆಗೆ 2019ರಲ್ಲಿ ನಡೆದ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಹುಲ್‌ ಅವರು ಕೋಲಾರದಲ್ಲಿ ಮಾಡಿದ ಭಾಷಣದಲ್ಲಿ ‘ಎಲ್ಲ ಕಳ್ಳರಿಗೂ ಮೋದಿ ಎಂಬ ಉಪನಾಮ ಏಕಿದೆ’ ಎಂದು ಪ್ರಶ್ನಿಸಿದ್ದರು.

Leave a Reply

Your email address will not be published. Required fields are marked *

error: Content is protected !!