March 22, 2026

ಮುಸ್ಲಿಮರಿಗೆ ಇದ್ದ 2ಬಿ ಮೀಸಲಾತಿ ರದ್ದು: ಸಂಪುಟ ಸಭೆಯಲ್ಲಿ ಸಿಎಂ ಬೊಮ್ಮಾಯಿ ಘೋಷಣೆ

0
IMG-20230324-WA0031.jpg

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿದ್ದು, ಆರ್ಥಿಕವಾಗಿ ಹಿಂದುಳಿದ ಮುಸ್ಲಿಮರಿಗೆ ಇದ್ದ 2ಬಿ ಮೀಸಲಾತಿಯನ್ನು ರದ್ದುಪಡಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಸಂಪುಟ ಸಭೆಯ ನಂತರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ. 2ಸಿ ಗೆ ಶೇಕಡ 6ರಷ್ಟು ಹಾಗೂ 2ಡಿ ಗೆ ಶೇಕಡ 7 ರಷ್ಟು ಮೀಸಲಾತಿ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಬಲ ಸಮುದಾಯಕ್ಕೆ ಶೇಕಡ 5.5, ಭೋವಿ, ಲಂಬಾಣಿ ಸಮುದಾಯಕ್ಕೆ ಶೇಕಡ 4.5 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ. ಚುನಾವಣೆ ಸಂದರ್ಭದಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಇನ್ನು ಲಿಂಗಾಯಿತ ಸಮುದಾಯಕ್ಕೆ ಶೇ. 7 ರಷ್ಟು, ಒಕ್ಕಲಿಗ ಸಮುದಾಯಕ್ಕೆ 6 ಪರ್ಸೆಂಟ್ ಮೀಸಲಾತಿ ನೀಡಲಾಗಿದೆ.

ಎಸ್.ಸಿ. ಸಮುದಾಯದ ಮೀಸಲಾತಿಯಲ್ಲಿ ಒಳಮೀಸಲಾತಿ ಪ್ರಕಟಿಸಲಾಗಿದ್ದು, ಎಡಗೈ ಶೇ. 6, ಬಲಗೈ ಶೇ. 5.5 ರಷ್ಟು ಮೀಸಲಾತಿ ಪ್ರಕಟಿಸಲಾಗಿದೆ.

ಮುಸ್ಲಿಮರ ಶೇಕಡ 4 ರಷ್ಟು ಮೀಸಲಾತಿಗೆ ಕೊಕ್ ನೀಡಲಾಗಿದೆ. ಇತರೆ ದಲಿತ ಅಲೆಮಾರಿ ಸಮುದಾಯಕ್ಕೆ ಶೇಕಡ 1 ರಷ್ಟು ಮೀಸಲಾತಿ ಹಂಚಿಕೆ ಮಾಡಲಾಗಿದೆ.

ಧಾರ್ಮಿಕ ಅಲ್ಪಸಂಖ್ಯಾತರಿಗೆ 2 ಬಿ ಮೀಸಲಾತಿ ಇಲ್ಲ. ಹಿಂದುಳಿದ ವರ್ಗದಲ್ಲಿ ಒಂದೇ ಕೆಟಗರಿ ಮಾಡಲು ತೀರ್ಮಾನಿಸಲಾಗಿದೆ. ಎಸ್.ಟಿ. ಸಮುದಾಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಾಗುತ್ತದೆ.

Leave a Reply

Your email address will not be published. Required fields are marked *

error: Content is protected !!