March 11, 2026

ಪಿಎಸ್ಐ ನೇಮಕಾತಿ ಹಗರಣದ ಆರೋಪಿ ಗಣಪತಿ ಭಟ್ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

0
image_editor_output_image1331169675-1679701066610.jpg

ಕಾರವಾರ: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಿದ್ದ ಗಣಪತಿ ಭಟ್ ಶವವಾಗಿ ಪತ್ತೆಯಾಗಿದ್ದಾರೆ.

ಪಿಎಸ್‍ಐ (PSI) ಅಕ್ರಮ ನೇಮಕಾತಿ ಪ್ರಕರಣದಲ್ಲಿ ವಿಚಾರಣೆಗೊಳಪಟ್ಟಿದ್ದ ಸಿದ್ದಾಪುರ ತಾಲೂಕಿನ ನೆಲೆಮಾವು ಗ್ರಾಮದ ಗಣಪತಿ ಭಟ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮಧ್ಯಸ್ಥಿಕೆ ವಹಿಸಿ ಭಾಗಿಯಾಗಿದ್ದರು ಎಂಬ ಆರೋಪದಡಿ ಬಂಧಿತರಾಗಿದ್ದ ಗಣಪತಿ ಭಟ್ ತನಿಖೆ ಎದುರಿಸಿದ್ದರು. ವಿಚಾರಣೆ ಬಳಿಕ ಸಿದ್ದಾಪುರಕ್ಕೆ ಆಗಮಿಸಿದ್ದ ಗಣಪತಿ ಭಟ್ ಮೃತದೇಹ ಅವರ ಸ್ವಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಸಿಕ್ಕಿದೆ.

ಪೊಲೀಸ್ ಮೂಲಗಳ ಪ್ರಕಾರ ಸಿದ್ದಾಪುರ ತಾಲೂಕಿನ ನೆಲಮಾವಿನ ಗಣಪತಿ ಭಟ್ ನೆಲಮಾವು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.

ಹಲವು ರಾಜಕಾರಣಿಗಳ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದ ಇವರು ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಹಲವು ವಿಷಯಗಳಲ್ಲಿ ಬ್ರೋಕರಿಂಗ್ ಕೆಲಸ ಮಾಡುತ್ತಿದ್ದರು.

ಗಣಪತಿ ಭಟ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದು, ಕಾರಣ ತಿಳಿದುಬಂದಿಲ್ಲ. ಶವವನ್ನು ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಸಿದ್ದಾಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!