May 10, 2026

ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆ

0
image_editor_output_image-1864519326-1679735779682.jpg

ಕಾಸರಕೋಡು (ಉತ್ತರ ಕನ್ನಡ): ಕಾಸರಕೋಡು ಕಡಲತೀರದಲ್ಲಿ ಅಪರೂಪದ ‘ಗಿಟಾರ್ ಫಿಶ್’ ಪತ್ತೆಯಾಗಿದೆ.

ಇದು ಚಿಕ್ಕ ಶಾರ್ಕ್ ಗಳಲ್ಲಿ ಒಂದಾಗಿದ್ದು, ಸುಮಾರು 1 ಅಡಿ ಉದ್ದವನ್ನು ಹೊಂದಿದೆ. ಕಡಲತೀರಗಳಲ್ಲಿ ಅಪರೂಪವಾಗಿ ಈ ಮೀನುಗಳು ಕಂಡು ಬರುತ್ತವೆ.

ಕಡಲತೀರದಲ್ಲಿ ಮೀನು ಬಿದ್ದಿರುವುದು ಕಂಡು ಬಂದಿದ್ದು. ಈ ಹಿಂದೆ ಇಂತಹ ಮೀನನನ್ನು ಎಲ್ಲಿಯೂ ನೋಡಿರಲಿಲ್ಲ ಎಂದು ಕಾಸರಕೋಡಿನ ಇಕೋ ಬೀಚ್‌ನ ವ್ಯವಸ್ಥಾಪಕ ವಿನೋದ್ ಎಸ್ ಸಿದ್ಲಾನಿ ಹೇಳಿದ್ದಾರೆ.

ಇದು ಚಿಕ್ಕ ಶಾರ್ಕ್‌ಗಳಲ್ಲಿ ಒಂದಾಗಿದೆ ಮತ್ತು ಅಪರೂಪವಾಗಿ ಕಂಡುಬರುತ್ತದೆ ಎಂದು ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ಸಾಗರ ಜೀವಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಶಿವಕುಮಾರ ಹರಗಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!