ತ್ರಿಪುರಾ: ಹಂಪ್ಸಾಪಾರ ಬ್ರೂ ಕ್ಯಾಂಪ್‌ನಲ್ಲಿ 18 ಮನೆಗಳು ಬೆಂಕಿಗಾಹುತಿ
ತ್ರಿಪುರಾ: ಪಾಣಿಸಾಗರ್ ಉಪವಿಭಾಗದ ವ್ಯಾಪ್ತಿಯಲ್ಲಿರುವ ಹಂಪ್ಸಾಪರ ಬ್ರೂ ಕ್ಯಾಂಪ್‌ನಲ್ಲಿ ಭಾನುವಾರ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 18 ಮನೆಗಳು ಬೆಂಕಿಗೆ ಆಹುತಿಯಾಗಿವೆ.
ಪೀಡಿತ ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ ಮತ್ತು ತ್ರಿಪುರಾ ಸರ್ಕಾರ ಮತ್ತು ಸ್ಥಳೀಯ ಆಡಳಿತದಿಂದ ಅಗತ್ಯ ಸಹಾಯವನ್ನು ಒದಗಿಸಲಾಗುತ್ತಿದೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಬೆಂಕಿ ಅವಘಡಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಶಂಕಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.





