May 10, 2026

ಬಂಟ್ವಾಳ: ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ: ಆರೋಪಿಯ ಬಂಧನ

0
image_editor_output_image1359476888-1679862688586.jpg

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬಂಧಿತನನ್ನು ಶೋಯೆಬ್‌ ಅಕ್ತರ್‌ ಎಂದು ಗುರುತಿಸಲಾಗಿದೆ.

ನಿನ್ನೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಉಪ-ನಿರೀಕ್ಷಕ ಜಯಶ್ರೀ ಪ್ರಭಾಕರ ಅವರು ರೌಂಡ್ಸ್‌ ಕರ್ತವ್ಯದಲ್ಲಿದ್ದ ವೇಳೆ ತುಂಬೆ ಸಾರ್ವಜನಿಕ ಬಸ್‌ ತಂಗುದಾಣದ ಬಳಿ ಯುವಕನೊಬ್ಬ ಮಾದಕ ವಸ್ತು ಸೇವಿಸಿ ಅಮಲಿನಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ವರ್ತಿಸುತ್ತಿದ್ದ.

ಈ ವೇಳೆ ಆತನನ್ನು ವಿಚಾರಿಸಿದಾಗ ಆತ ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಮದಕ ನಿವಾಸಿ ಎಂದು ತಿಳಿದು ಬಂದಿದ್ದು, ಕೂಡಲೇ ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಸದ್ಯ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!