March 11, 2026

ಪಡುಬಿದ್ರಿ: ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 5 ಲಕ್ಷ ರೂ. ವಶಕ್ಕೆ ಪಡೆದ ಪೊಲೀಸರು

0
image_editor_output_image-877233251-1679907197986.jpg

ಪಡುಬಿದ್ರಿ: 2023ರ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಹೆಜಮಾಡಿ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ5 ಲಕ್ಷ ರೂ. ಹಣವನ್ನು ವಶಕ್ಕೆ ಪಡೆದ ಘಟನೆ ನಡೆದಿದೆ.

ಪಡುಬಿದ್ರಿ ಪೊಲೀಸ್ ಠಾಣಾ ಪೊಲೀಸ್‌ ಉಪನಿರೀಕ್ಷಕರ ಪುರುಷೋತ್ತಮ ಎ ಇವರು ಹೆಜಮಾಡಿ ಚೆಕ್ ಪೋಸ್ಟ್ ನಲ್ಲಿ ಮಾ. 26ರಂದು ಕರ್ತವ್ಯದಲ್ಲಿರುವಾಗ ಸಂಜೆ 4:35ರ ವೇಳೆಗೆ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಟೊಯೆಟಾ ಗ್ಲಾಂಝಾ ಬಿಳಿ ಬಣ್ಣದ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ್ದಾರೆ.

ಈ ವೇಳೆ ಚಾಲಕನ ಎಡ ಬದಿಯ ಟೂಲ್ಸ್ ಬಾಕ್ಸ್ ಒಳಗಡೆ ಕೈ ಚೀಲ ದೊರಕ್ಕಿದ್ದು, ಇದನ್ನು ಪರಿಶೀಲಿಸಿದಾಗ ಅದರೊಳಗೆ 500 ರೂಪಾಯಿ ಮುಖ ಬೆಲೆಯ ಭಾರತೀಯ ಕರೆನ್ಸಿ ನೋಟುಗಳಿರುವ ಒಟ್ಟು ಸೇರಿಸಿ ಬಂಡಲ್ ಮಾಡಿ ಇಟ್ಟಿರುವ ಹಣ ಕಂಡುಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!