May 11, 2026

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೊಂದು ಶಾಕ್: ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್

0
IMG-20230327-WA0035.jpg

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಸತ್ತಿನ ಸದಸ್ಯತ್ವದ ನಂತರ ಇದೀಗ ಸರ್ಕಾರಿ ಬಂಗಲೆ ತೊರೆಯುವಂತೆ ನೋಟಿಸ್ ನೀಡಲಾಗಿದೆ.

ಲೋಕಸಭೆಯ ಸದನ ಸಮಿತಿ ಈ ಸೂಚನೆ ನೀಡಿದ್ದು, ಏಪ್ರಿಲ್ 22 ರೊಳಗೆ ರಾಹುಲ್ ಗಾಂಧಿ ತಮ್ಮ ಅಧಿಕೃತ ನಿವಾಸವನ್ನು ಖಾಲಿ ಮಾಡಬೇಕಾಗುತ್ತದೆ.

ಇನ್ನು ಮೋದಿ ಉಪನಾಮ’ಕ್ಕೆ ಸಂಬಂಧಿಸಿದ ಟೀಕೆಗಳ ವಿರುದ್ಧ 2019ರಲ್ಲಿ ದಾಖಲಿಸಲಾದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸೂರತ್ ನ್ಯಾಯಾಲಯ ಗುರುವಾರ ದೋಷಿ ಎಂದು ಘೋಷಿಸಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದಾದ ಬಳಿಕ ಶುಕ್ರವಾರ ರಾಹುಲ್ ಗಾಂಧಿ ಅವರನ್ನ ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿತ್ತು. ಇದೀಗ ಮತ್ತೊಂದು ಶಾಕ್ ನೀಡಲಾಗಿದೆ.

Leave a Reply

Your email address will not be published. Required fields are marked *

error: Content is protected !!