May 10, 2026

ಲಂಚ ಪಡೆದ ಪ್ರಕರಣ:
ಶಾಸಕ ಮಾಡಾಳ ವಿರೂಪಾಕ್ಷಪ್ಪ ಬಂಧನ

0
madal-virupakshappa-1-1196896-1677985402.jpg

ಬೆಂಗಳೂರು: ಲಂಚ ಪಡೆದ ಪ್ರಕರಣದಲ್ಲಿ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ ಚನ್ನಗಿರಿ ಶಾಸಕ ಮಾಡಾಳ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಇಂದು ಬಂಧಿಸಿದ್ದಾರೆ.

ಜಾಮೀನು ಅರ್ಜಿ ವಜಾಗೊಂಡ ಬಳಿಕ ಶಾಸಕರು ನಾಪತ್ತೆಯಾಗಿದ್ದರು. ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಬಂಧಿಸಲಾಗಿದೆ. ಚನ್ನಗಿರಿಯಿಂದ ಇನ್ನೋವಾ ಕಾರಿನಲ್ಲಿ ಬೆಂಗಳೂರಿಗೆ ಬರುತ್ತಿರುವ ವೇಳೆ ಲೋಕಾಯುಕ್ತ ಪೊಲೀಸರು ಮಾಡಾಳ್ ವಿರೂಪಾಕ್ಷಪ್ಪರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಮನೆ ಮತ್ತು ಕಚೇರಿಯಲ್ಲಿ ಎಂಟು ಕೋಟಿ ರೂಪಾಯಿಗೂ ಅಧಿಕ ಹಣ ಪತ್ತೆಯಾಗಿತ್ತು.

Leave a Reply

Your email address will not be published. Required fields are marked *

error: Content is protected !!