May 10, 2026

ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ

0
IMG-20230327-WA0039.jpg

ಶಿವಮೊಗ್ಗ: ಮಾಜಿ ಸಿಎಂ ಯಡಿಯೂರಪ್ಪ ಅವರ ಶಿಕಾರಿಪುರ ಪಟ್ಟಣದಲ್ಲಿರುವ ಮೈತ್ರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದೆ.

ಬಂಜಾರ ಸಮುದಾಯದಿಂದ ಒಳಮೀಸಲಾತಿ ಜಾರಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವುದನ್ನು ವಿರೋದಿಸಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದು, ಮನೆಯ ಕಿಟಕಿ ಗಾಜು ಒಡೆದು ಹಾಕಿದ್ದಾರೆ.

ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ ನೂಕಾಟ ಉಂಟಾಗಿದ್ದು, ಪ್ರತಿಭಟನಾಕಾರರು ಪೊಲೀಸರ ಮೇಲೆಯೇ ಚಪ್ಪಲಿ, ಕಲ್ಲು ತೂರಿದ್ದಾರೆ. ಘಟನೆಯಲ್ಲಿ ಕೆಲವು ಪೊಲೀಸ್​ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!