March 22, 2026

ಸೌದಿ ಅರೇಬಿಯಾದಲ್ಲಿ ಭೀಕರ ರಸ್ತೆ ಅಪಘಾತ:
ಮಂಗಳೂರು ಮಲ್ಲೂರಿನ ಯುವಕ ಮೃತ್ಯು

0
IMG-20230327-WA0004.jpg

ಮಂಗಳೂರು: ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.

ಮಂಗಳೂರು ತಾಲೂಕಿನ ಮಲ್ಲೂರು ನಿವಾಸಿ ಸುಲೈಮಾನ್ (35) ಎಂಬವರು ಮೃತಪಟ್ಟ ವ್ಯಕ್ತಿ. ಸುಲೈಮಾನ್ ರವರು ರಸ್ತೆ ದಾಟುತ್ತಿದ್ದ ವೇಳೆ ವಾಹನ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮಲ್ಲೂರು ಪಲ್ಲಿಬೆಟ್ಟು ಅಬೂಬಕರ್ ಎಂಬವರ ಪುತ್ರ ಸುಲೈಮಾನ್‌ ಅವರು ಜುಬೈಲ್‌ನ ಲುಮಿನಾಸ್ ಕಂಪೆನಿಯ ಉದ್ಯೋಗಿಯಾಗಿದ್ದರು. ಇಬ್ಬರು ಮಕ್ಕಳ ತಂದೆಯಾಗಿರುವ ಸುಲೈಮಾನ್ ಅವರು ಎಪ್ರಿಲ್ 20ರಂದು ಊರಿಗೆ ಹೋಗಲು ನಿಶ್ಚಯಿಸಿದ್ದರು ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!