February 3, 2026

ಅಕ್ರಮ ಸಂಬಂಧ  ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆ ಮಾಡಿದ ಪತಿ

0
image_editor_output_image224983981-1679991376971.jpg

ಚಾಮರಾಜನಗರ: ಪತಿಯ ಅಕ್ರಮ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿ ಕೊಲೆಯಾದ ಘಟನೆ ಚಾಮರಾಜನಗರ ತಾಲೋಕು ಮೂಡ್ನಾಕೂಡು ಗ್ರಾಮದಲ್ಲಿ ನಡೆದಿದೆ.

ಎಂ.ಸಿ.ಸೌಮ್ಯ (27) ಕೊಲೆಯಾದ ಮಹಿಳೆ. ಏಳು ವರ್ಷಗಳ ಹಿಂದೆ ಸೌಮ್ಯಳನ್ನು ವಿವಾಹವಾಗಿದ್ದ ಮಹೇಶ್ ಚಂದ್ರಗುರು ಪರಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದ ಸೌಮ್ಯಾ, ಪತಿಯನ್ನು ಪ್ರಶ್ನೆ ಮಾಡಿದ್ದಾರೆ.

ಪತ್ನಿ ಪ್ರಶ್ನಿಸಿದ್ದಕ್ಕೆ ಸಿಟ್ಟುಗೊಂಡ ಮಹೇಶ್ ಚಂದ್ರಗುರು, ಸೌಮ್ಯಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಸದ್ಯ ಆರೋಪಿ ಪತಿ ಮಹೇಶ್ ಚಂದ್ರಗುರುವನ್ನು ಪೊಲೀಸರು ಬಂಧಿಸಿದ್ದಾರೆ.

ದಂಪತಿಗೆ 5 ವರ್ಷದ ಹೆಣ್ಣು ಮಗುವಿದೆ. ಇದೀಗ ಪ್ರಕರಣ ಸಂಬಂಧ ಚಾಮರಾಜನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!