March 22, 2026

ಮಂಜೇಶ್ವರ: ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಢಿಕ್ಕಿ: ಓರ್ವ ವಿದ್ಯಾರ್ಥಿ ಮೃತ್ಯು

0
20230328_202826.jpg

ಮಂಜೇಶ್ವರ: ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಢಿಕ್ಕಿ ಸಂಭವಿಸಿ ವಿದ್ಯಾರ್ಥಿಯೋರ್ವ ಮೃತಪಟ್ಟ ದಾರುಣ ಘಟನೆ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ಇಂದು ಮಧ್ಯಾಹ್ನ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಮಂಜೇಶ್ವರದ ಕುಂಜತ್ತೂರಿನ ಆದಿಲ್(22) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದಾನೆ.

ಕುಂಬಳೆ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ ಆದಿಲ್, ಕಾಲೇಜಿನಿಂದ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಹಸವಾರನಿಗೆ ಗಂಭೀರ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತಾರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಮಂಜೇಶ್ವರ ಠಾಣಾ ಪೊಲೀಸರು ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!