September 2, 2026

ಶಬರಿಮಲೆ ಯಾತ್ರಿಗಳು ತೆರಳುತ್ತಿದ್ದ ಬಸ್‌ ಪಲ್ಟಿ: 20ಕ್ಕೂ ಅಧಿಕ ಮಂದಿ ಗಾಯ

0
image_editor_output_image821836352-1680045566624.jpg

ತಿರುವನಂತಪುರಂ: ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್ ಬಳಿಯ ಎಲವುಂಕಲ್‌‌ನಲ್ಲಿ ಶಬರಿಮಲೆ ಯಾತ್ರಿಗಳು ತೆರಳುತ್ತಿದ್ದ ಬಸ್‌ ಪಲ್ಟಿಯಾಗಿ 20 ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಶಬರಿಮಲೆ ದರ್ಶನವನ್ನು ಮುಗಿಸಿ ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬಸ್‌ ಪಲ್ಟಿಯಾಗಿ ಕಮರಿಗೆ ಉರುಳಿದ್ದು, ಪರಿಣಾಮ ತಮಿಳುನಾಡು ಮೂಲದ 9 ಮಕ್ಕಳು ಸೇರಿದಂತೆ ಒಟ್ಟು 64 ಪ್ರಯಾಣಿಕರಲ್ಲಿ 20 ಕ್ಕೂ ಹೆಚ್ಚಿನ ಮಂದಿಗೆ ಗಾಯಗಳಾಗಿವೆ ಎಂದು ವರದಿ ತಿಳಿಸಿದೆ.

ಇನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆ ಮತ್ತು ಪತ್ತನಂತಿಟ್ಟ ಜನರಲ್ ಆಸ್ಪತ್ರೆಗೆ ಗಾಯಾಳುಗಳನ್ನು ರವಾನಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!