March 22, 2026

ಶಾಲೆಯಲ್ಲಿ ಬಿಸಿಯೂಟ ಸೇವಿಸಿ 36 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

0
image_editor_output_image1144485838-1680046704981.jpg

ಧಾರವಾಡ : ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 36 ಮಕ್ಕಳು ಅಸ್ವಸ್ಥಗೊಂಡಿದ್ದಾರೆ.

ಎಂದಿನಂತೆ ಮಂಗಳವಾರ ಮಧ್ಯಾಹ್ನ ಕೂಡ ಮಕ್ಕಳಿಗೆ ಬಿಸಿಯೂಟ ನೀಡಿದಾಗ ಅನ್ನದಲ್ಲಿ ಹಲ್ಲಿಯಂತ ಹುಳು ಕಂಡು ಬಂದಿವೆ.

ಬಳಿಕ ಊಟ ಸೇವಿಸಿದ ಸುಮಾರು 36 ಮಕ್ಕಳಳು ವಾಂತಿ, ವಾಕರಿಕೆ ಮಾಡಿಕೊಂಡ ಪರಿಣಾಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ಈ ವಿಷಯ ತಿಳಿದ ತಕ್ಷಣ ಶಲವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಸ್ಥಳಕ್ಕೆ ಆಗಮಿಸಿ ಅಲ್ಲಿಯೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.

ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ನವಲಗುಂದ ತಾಲೂಕಾ ಆಸ್ಪತ್ರೆಗೆ ದಾಖಲಿಸಲು ಸೂಚಿಸಲಾಗಿತ್ತು. ಅದರಂತೆ ಕ್ರಮ ಕೈಗೊಂಡಿದ್ದಾರೆ.

ಇದೀಗ ಎಲ್ಲ ಮಕ್ಕಳು ಗುಣಮುಖರಾಗಿ, ಆರೋಗ್ಯವಾಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ ಅವರು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!