ರಾಜ್ಯ ಚುನಾವಣೆಯ ದಿನಾಂಕ ಪ್ರಕಟ: 224 ವಿಧಾನಸಭಾ ಕ್ಷೇತ್ರಗಳಿಗೆ ಮೇ.10 ರಂದು ಒಂದೇ ಹಂತದ ಚುನಾವಣೆ: ಮೇ.13ರಂದು ಮತ ಎಣಿಕೆ
ಹೊಸದಿಲ್ಲಿ: ಭಾರತೀಯ ಚುನಾವಣಾ ಆಯೋಗ (ಇಸಿಐ) ಇಂದು (ಬುಧವಾರ) ರಾಜ್ಯ ವಿಧಾನಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿದೆ.
ದೆಹಲಿಯ ವಿಜ್ಞಾನ ಭವನದಲ್ಲಿಂದು ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದದರು.
224 ವಿಧಾನಸಭಾ ಕ್ಷೇತ್ರಗಳಿಗೆ ಮೇ.10 ರಂದು ಒಂದೇ ಹಂತದ ಮತದಾನ ಹಾಗೂ ಮೇ.13ರಂದು ಮತ ಎಣಿಕೆ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಈ ತಿಂಗಳ ಆರಂಭದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಕರ್ನಾಟಕಕ್ಕೆ ಭೇಟಿ ನೀಡಿ ರಾಜ್ಯದಲ್ಲಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ್ದರು.




