February 3, 2026

ಉತ್ತರ ಪ್ರದೇಶ: ಮಹಿಳೆಯ ಮೇಲೆ ಮೂರು ದಿನಗಳ ಕಾಲ ಅತ್ಯಾಚಾರ

0
Stop_Rape-Image.jpg

ಮುಜಫರ್‌ನಗರ: ಇಲ್ಲಿ 24 ವರ್ಷದ ಮಹಿಳೆಯೊಬ್ಬರನ್ನು ಮೂರು ದಿನಗಳ ಕಾಲ ಸೆರೆಯಲ್ಲಿಟ್ಟು ಥಳಿಸಿ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮಹಿಳೆ ಪೊಲೀಸರಿಗೆ ನೀಡಿರುವ ದೂರಿನ ಪ್ರಕಾರ, ವ್ಯಕ್ತಿಯೊಬ್ಬ ಆಕೆಯನ್ನು ಬಲವಂತವಾಗಿ ಹೋಟೆಲ್‌ಗೆ ಕರೆದೊಯ್ದು ಅಲ್ಲಿ ನಿದ್ರಾಜನಕ ಬೆರೆಸಿದ ಪಾನೀಯಗಳನ್ನು ಸೇವಿಸುವಂತೆ ಮಾಡಿ ಮೂರು ದಿನಗಳ ಕಾಲ ಅತ್ಯಾಚಾರವೆಸಗಿದ್ದಾನೆ ಎಂದು ಅವರು ಹೇಳಿದ್ದಾರೆ.

ತನ್ನನ್ನು ತಾನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದಾಗ ಆರೋಪಿ ತನ್ನನ್ನು ಹೊಡೆದಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ರಾಹುಲ್ ವರ್ಮಾ ತಲೆಮರೆಸಿಕೊಂಡಿದ್ದಾನೆ ಮತ್ತು ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!