March 11, 2026

ಉಳ್ಳಾಲ: ಬೈಕ್ ನಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ದೋಚಿದ್ದ ಪ್ರಕರಣ: ಮೂವರು ಆರೋಪಿಗಳ ಬಂಧನ

0
image_editor_output_image-863547397-1680133006522.jpg

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದಲ್ಲಿ ಬೈಕಲ್ಲಿ ತೆರಳುತ್ತಿದ್ದ ಜೋಡಿಯನ್ನ ಅಡ್ಡ ಕಟ್ಟಿ ಐ-ಪೋನ್ ಮತ್ತು ಬೈಕನ್ನ ದೋಚಿದ್ದ ಮೂವರು ಖದೀಮರನ್ನ ಉಳ್ಳಾಲ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲದ ಜಿಯೋ ಪೆಟ್ರೋಲ್ ಪಂಪ್ ಬಳಿ ಕಳೆದ ಸೋಮವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಯುವಕ ಮತ್ತು ಯುವತಿ ಬೈಕಲ್ಲಿ ಜತೆಯಾಗಿ ತೆರಳುತ್ತಿದ್ದ ವೇಳೆ ಎರಡು ಸ್ಕೂಟರಲ್ಲಿ ಬಂದ ಮೂವರು ಖದೀಮರು‌ ಅಡ್ಡ ಕಟ್ಟಿ ಯುವತಿಯ ಕೈಯಲ್ಲಿದ್ದ ಬೆಲೆ ಬಾಳುವ ಐ-ಫೋನ್ ಸುಲಿಗೆ ಮಾಡಿದ್ದಲ್ಲದೆ,ಮೋಟಾರು ಬೈಕನ್ನೂ ದೋಚಿ ಪರಾರಿಯಾಗಿದ್ದರು.

ಈ ಬಗ್ಗೆ ನೊಂದ ಬೈಕ್ ಸವಾರ ಅಬ್ದುಲ್ಲ ಎಂಬವರು ಉಳ್ಳಾಲ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಿದ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಉಳ್ಳಾಲ ಬಸ್ತಿಪಡ್ಪು ನಿವಾಸಿ ಝಾಕೀರ್ ಹುಸೇನ್‌ ಅಲಿಯಾಸ್ ಶಾಕೀರ್-ಜಾಹೀರ್(27), ಸೋಮೇಶ್ವರ ಗ್ರಾಮದ ಪಿಲಾರು ನಿವಾಸಿ ಮಹಮ್ಮದ್ ಉಬೈದುಲ್ಲಾ ಅಲಿಯಾಸ್ ಉಬ್ಬಿ(33),ಉಳ್ಳಾಲ ,ಮೇಲಂಗಡಿ ನಿವಾಸಿ ಇಬ್ರಾಹಿಮ್ ಖಲೀಲ್ ಅಲಿಯಾಸ್ ಖಲೀಲ್(22) ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ 2 ಸ್ಕೂಟರ್ ಗಳು, ಸುಲಿಗೆ ನಡೆಸಿದ್ದ ಐಫೋನ್,ಮತ್ತು ಯಮಹಾ ಮೋಟಾರು ಬೈಕನ್ನು ಸ್ವಾಧೀನಪಡಿಸಿಕೊಳ್ಳಲಾಗಿದ್ದು ಆರೋಪಿಗಳನ್ನು ನಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!