May 10, 2026

23 ವರ್ಷದ ತ್ರಿವೇಣಿ ಬಳ್ಳಾರಿ ಪಾಲಿಕೆ ಮೇಯರ್ ಆಗಿ ಆಯ್ಕೆ: ರಾಜ್ಯದ ಕಿರಿಯ ಮೇಯರ್ ಎಂಬ ಹೆಗ್ಗಳಿಕೆ

0
image_editor_output_image619212905-1680133793012.jpg

ಬಳ್ಳಾರಿ: ಮಹಾನಗರ ಪಾಲಿಕೆಯ 22 ನೇ ಅವಧಿಯ ನೂತನ ಮೇಯರ್ ಆಗಿ ಕಾಂಗ್ರೆಸ್ ಪಕ್ಷದ 4 ನೇ ವಾರ್ಡ್ ನ ಡಿ.ತ್ರಿವೇಣಿ, ಉಪ ಮೇಯರ್ ಆಗಿ 33 ನೇ ವಾರ್ಡ್ ನ ಬಿ.ಜಾನಕಿ ಆಯ್ಕೆಯಾಗಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನೂತನ ಮೇಯರ್ ತ್ರಿವೇಣಿ ಡಿ.ಸೂರಿ, ಮೇಯರ್ ಆಗಿ ಆಯ್ಕೆಯಾಗಿದ್ದಕ್ಕೆ ತುಂಬ ಖುಷಿಯಾಗಿದೆ. 21 ನೇ ವಯಸ್ಸಿಗೆ ಪಾಲಿಕೆ ಸದಸ್ಯೆಯಾಗಿದ್ದ ನಾನು ಇದೀಗ 23 ನೇ ವಯಸ್ಸಿಗೆ ಪಾಲಿಕೆ ಮೇಯರ್ ಆಗಿ ಆಯ್ಕೆಯಾಗಿದ್ದೇನೆ. ನನ್ನೆಲ್ಲ ಕನಸುಗಳು ನನ್ನ ತಂದೆ ಈಡೇರಿಸಿದ್ದಾರೆ. ಆರೋಗ್ಯ ನಿರೀಕ್ಷಕರ ಕೋರ್ಸ್ ವ್ಯಾಸಂಗ ಮಾಡಿದ್ದೇನೆ. ಪಾಲಿಕೆಯ ಎಲ್ಲ ಸದಸ್ಯರನ್ನು ಗಣನೆಗೆ ತೆಗೆದುಕೊಂಡು ಅವರೊಂದಿಗೆ ಸೇರಿ ಕೆಲಸ ಮಾಡುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!