March 22, 2026

ಕಡಬ: ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬಿದ್ದು ದೈವನರ್ತಕ ನಿಧನ

0
IMG-20230330-WA0024.jpg

ಕಡಬ: ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ದೈವ ನರ್ತಕರೊಬ್ಬರು ಇಹಲೋಕ ತ್ಯಜಿಸಿದ ಘಟನೆ ಮಾ.30ರ ಮುಂಜಾನೆ ಎಡಮಂಗಲ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ದೈವ ನರ್ತಕರಾಗಿ ಹೆಸರುವಾಸಿಯಾಗಿದ್ದ ಕಾಂತು ಅಜಿಲ ಮೂಲಂಗೀರಿಯವರು ಹಲವಾರು ವರ್ಷಗಳಿಂದ ಎಡಮಂಗಲ ಗ್ರಾಮದ ಕೂಡುಗಟ್ಟಿಗೆ ಸಂಬಂಧಿಸಿದಂತೆ ದೈವಾರಾದಕರಾಗಿ ಗ್ರಾಮದೈವಗಳ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಮಾ.30 ರಂದು ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿತ್ತು. ದೈವ ನರ್ತನ ಮಾಡುತ್ತಿರುವಾಗಲೇ ಕುಸಿದು ಬೀಳುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದರೂ ಫಲ ನೀಡಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

ಹೆಚ್ಚಿನ ವಿವರ ತಿಳಿದು ಬರಬೇಕಿದೆ. ಎಡಮಂಗಲ ಪರಿಸರದಲ್ಲಿ ಮತ್ತು ಇತರ ಕಡೆಗಳಲ್ಲಿಯೂ ದೊಡ್ಡ ದೊಡ್ಡ ದೈವಗಳ ನರ್ತನ ಸೇವೆಯನ್ನು ಮಾಡುತ್ತಿದ್ದರು.

Leave a Reply

Your email address will not be published. Required fields are marked *

error: Content is protected !!