February 1, 2026

ಬೆಳ್ತಂಗಡಿ : ಸವಣಾಲು ಎರಡು ಬೈಕ್ ಗಳ ನಡುವೆ ಅಪಘಾತ:
ಬೈಕ್ ಓರ್ವ ಸ್ಥಳದಲ್ಲಿಯೇ ಸಾವು: ಇನ್ನೊಬ್ಬ ಗಂಭೀರ

0
image_editor_output_image-31384689-1680165409676

ಬೆಳ್ತಂಗಡಿ : ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು ಓರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು. ಇನ್ನೊಂದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಸವಣಾಲು ಮಸೀದಿ ಬಳಿ ಎರಡು ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿ ಹೊಡೆದಿದ್ದು ಈ ವೇಳೆ ಅಳದಂಗಡಿಯ ಕುರ್ದಲಬೆಟ್ಟು ನಿವಾಸಿ ಹೆನ್ಡ್ರಿ ಡಿಸೋಜಾ(62) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನೊಂದು ಬೈಕ್ ಸವಾರ ಬೆಳ್ತಂಗಡಿ ತಾಲೂಕಿನ ಕರಂಬಾರು ನಿವಾಸಿ ಕರುಣಾಕರ ಹೆಗ್ಡೆ (60) ಗಂಭೀರ ಗಾಯಗೊಂಡಿದ್ದು ಗುರುವಾಯನಕೆರೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಸಾವನ್ನಪ್ಪಿದ ಹೆನ್ಡ್ರಿ ಡಿಸೋಜಾ ಅವರಿಗೆ ಇಬ್ಬರು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಕ್ಕಳಿದ್ದಾರೆ. ಸಾವನ್ನಪ್ಪಿದ ಹೆನ್ಡ್ರಿ ಡಿಸೋಜಾ ಶವವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಶವಗಾರಕ್ಕೆ ಸಾಗಿಸಲಾಗಿದ್ದು .
ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಸಂತೋಷ್ ಮತ್ತು ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು.ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ ನೀಡಿ ಕುಟುಂಬಸ್ಥರಿಗೆ ಸ್ವಂತಾನ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!