ವಿಧಾನಸಭೆ ಕಲಾಪದ ವೇಳೆ ಅಶ್ಲೀಲ ವೀಡಿಯೋ ವೀಕ್ಷಿಸಿದ ಬಿಜೆಪಿ ಶಾಸಕ: ಕ್ಯಾಮರಾ ಕಣ್ಣಲ್ಲಿ ಸೆರೆ, ವಿಡಿಯೋ ವೈರಲ್
ತ್ರಿಪುರಾ: ತ್ರಿಪುರಾ ವಿಧಾನಸಭೆಯ ಅಧಿವೇಶನದ ವೇಳೆ ಬಿಜೆಪಿ ಶಾಸಕರೊಬ್ಬರು ಅಶ್ಲೀಲ ವಿಡಿಯೋ ವೀಕ್ಷಿಸಿ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.
ತ್ರಿಪುರಾದ ಬಗ್ಬಾಸಾ ಕ್ಷೇತ್ರದ ಬಿಜೆಪಿ ಶಾಸಕ ಜದಬ್ ಲಾಲ್ ನಾಥ್ ಅವರು ಕಲಾಪದ ವೇಳೆ ತನ್ನ ಮೊಬೈಲ್ ನಲ್ಲಿ ಅಶ್ಲೀಲ ವೀಡಿಯೋ ನೋಡುತ್ತಿರುವುದು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದು, ಇದೀಗ ಈ ವೀಡಿಯೋ ವೈರಲ್ ಆಗಿದೆ.
ಇನ್ನು 2012ರಲ್ಲಿ ಕರ್ನಾಟಕದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಕಲಾಪ ನಡೆಯುತ್ತಿರುವಾಗ ಇಬ್ಬರು ಸಚಿವರು ಮೊಬೈಲ್ ಫೋನ್‌ನಲ್ಲಿ ಅಶ್ಲೀಲ ವಿಡಿಯೋವನ್ನು ನೀಡಿರುವುದು ಕ್ಯಾಮರಾದಲ್ಲಿ ಸೆರೆಯಾಗಿತ್ತು.




