ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ
ಕಾಸರಗೋಡು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದು ಕಳೆದ ಆರು ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ನೀಲೇಶ್ವರ ಪೊಲೀಸರು ಅಸ್ಸಾಂ ನಿಂದ ಬಂಧಿಸಿದ್ದಾರೆ.
ಅಸ್ಸಾಂ ಮಿಲನ್ ಪುರದ ಶೇಖರ ಚೌಧರಿ(42) ಬಂಧಿತ ಆರೋಪಿ.
2016ರಲ್ಲಿ ಚಾಯೋತ್ ನ ಫ್ಲೈ ವುಡ್ ಕಂಪೆನಿಯಲ್ಲಿ ಕೆಲಸ ನಿರ್ವ ಹಿಸುತ್ತಿದ್ದ ಈತ ಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಈತನನ್ನು ಬಂಧಿಸಿದ್ದರು.
ಇನ್ನು ಕಣ್ಣೂರು ಸೆಂಟ್ರಲ್ ಜೈಲ್’ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಈತ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದನು. ನ್ಯಾಯಾಲಯ ಈತನಿಗಾಗಿ ವಾರಂಟ್ ಹೊರಡಿಸಿತ್ತು. ಆರೋಪಿಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಅಸ್ಸಾಂನಿಂದ ಈತನನ್ನು ಬಂಧಿಸಿ ಕಾಸರಗೋಡಿಗೆ ಕರೆದುಕೊಂಡು ಬಂದಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.





