March 11, 2026

ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡ ಗುಬ್ಬಿ ಶ್ರೀನಿವಾಸ್
 

0
DB-11032023-gubbi.jpg

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಗುಬ್ಬಿ ಶ್ರೀನಿವಾಸ್ ಜೆಡಿಎಸ್ ತೊರೆದು ಇಂದು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಬ್ಬಿ ಶ್ರೀನಿವಾಸ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಈ ವೇಳೆ ಮಾತನಾಡಿದ ಗುಬ್ಬಿ ಶ್ರೀನಿವಾಸ್, ಕಾಂಗ್ರೆಸ್ ನನ್ನ ಸ್ವಂತ ಮನೆ. ಸ್ವಂತ ಮನೆಗೆ ಹಿಂತಿರುಗಿರುವುದಕ್ಕೆ ಖುಷಿಯಾಗುತ್ತಿದೆ. ತುಮಕೂರಿನಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನಗಳನ್ನು ಪಡೆದುಕೊಳ್ಳುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತೇನೆ ಎಂದರು.

ಮೂಲತಃ ಕಾಂಗ್ರೆಸ್ಸಿಗನಾಗಿದ್ದ ನಾನು ಸಿದ್ದರಾಮಯ್ಯ ಅವರು ಜೆಡಿಎಸ್‌ಗೆ ಕರೆದಿದ್ದಕ್ಕೆ 2002ರಲ್ಲಿ ಜೆಡಿಎಸ್‌ಗೆ ಸೇರ್ಪಡೆಯಾಗಿದ್ದೆ. ಆದರೆ ನನಗೆ ಅಲ್ಲಿ ಮುಂದಿನ ಚುನಾವಣೆಗೆ ಟಿಕೆಟ್ ನೀಡದೇ ಇದ್ದಿದ್ದರಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದೆ. ನನಗೆ ನಾಟಕ, ಗಿಮಿಕ್ ಮಾಡುವುದು ಗೊತ್ತಿಲ್ಲ. ಯಾವ ಪಕ್ಷದಲ್ಲಿದ್ದೇನೆಯೋ ಆ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವುದು ನನ್ನ ಉದ್ದೇಶ ಎಂದು ಹೇಳಿದರು.

ಸಿದ್ದರಾಮಯ್ಯನವರನ್ನು 2007ರಲ್ಲಿ ಜೆಡಿಎಸ್ ಹೇಗೆ ಸೈಡ್‌ಲೈನ್ ಮಾಡಿತೋ ಅದೇ ರೀತಿ ನನ್ನನ್ನೂ ಮಾಡಿದೆ. ಅನಗತ್ಯ ಹೇಳಿಕೆ ನೀಡುವ ಜಿ.ಟಿ. ದೇವೇಗೌಡರನ್ನು ಪಕ್ಷದಲ್ಲಿ ಉಳಿಸಿಕೊಳ್ಳುತ್ತಾರೆ. ಆದರೆ ಪ್ರಾಮಾಣಿಕವಾಗಿ ಕೆಲಸ ಮಾಡಿದ ನನ್ನನ್ನು ಆಚೆ ತಳ್ಳುವ ಕೆಲಸ ಮಾಡಿದ್ದಾರೆ ಎಂದು ವಿಷಾದಿಸಿದರು.

Leave a Reply

Your email address will not be published. Required fields are marked *

You may have missed

error: Content is protected !!