ಮೂಡುಬಿದಿರೆ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಮೂಡುಬಿದಿರೆ: ಮೂಡುಬಿದಿರೆ ಠಾಣಾ ವ್ಯಾಪ್ತಿಯ ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನಡೆದಿದೆ.
ಪುರಸಭಾ ವ್ಯಾಪ್ತಿಯ ಪ್ರಾಂತ್ಯ ಗ್ರಾಮದ ಗೌರಿಕೆರೆ ರಾಮ ಮಂದಿರ ಬಳಿಯ ನಿವಾಸಿ ಚಂದ್ರಶೇಖರ ಭಟ್ ಎಂಬವರ ಪತ್ನಿ ಕುಸುಮಾ(49) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಮನೆಯಲ್ಲಿ ಮಹಿಳೆಯ ಗರ್ಭಿಣಿ ಮಗಳು ಇದ್ದು ಅವರು ಕೋಣೆಯಲ್ಲಿ ಮಲಗಿದ್ದರು. ಬೆಳಿಗ್ಗೆ 8.30ರ ವೇಳೆಗೆ ಮಗಳು ಎದ್ದು ಮನೆಯ ಹಾಲ್‌ಗೆ ಬಂದಾಗ ತಾಯಿ ಫ್ಯಾನ್ ಗೆ ನೇಣು ಬಿಗಿದುಕೊಂಡಿರುವುದು ಗಮನಕ್ಕೆ ಬಂದಿದೆ.
ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಭೇಟಿ ನೀಡಿ ಪ್ರಕಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಕುಸುಮಾ ಅವರು ಈ ಹಿಂದೆ ಖಾಸಗಿ ಶಾಲೆಗಳಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿದ್ದು, ಅವರಿಗೆ ಕಳೆದೆರಡು ವರ್ಷಗಳಿಂದ ಮಾನಸಿಕ ಖಿನ್ನತೆಗೆ ಚಿಕಿತ್ಸೆ ನಡೆಯುತ್ತಿತ್ತು ಎನ್ನಲಾಗಿದೆ.





