ಮಂಗಳೂರು: ಲಾಡ್ಜ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಮಂಗಳೂರು: ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್‌ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ.
ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ಬಂದರು ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿ ತನಿಖೆ ಆರಂಭಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಲಾಗುತ್ತಿದೆ.





