ರಸ್ತೆಯಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ: ಯುವಕನನ್ನು ಬಂಧಿಸಿದ ಪೊಲೀಸರು
ಬೆಂಗಳೂರು: ನಡು ರಸ್ತೆಯಲ್ಲಿ ನಿಂತು ಪಾಕಿಸ್ತಾನದ ಪರ ಘೋಷಣೆ ಕೂಗಿದ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ.
ಬೆಂಗಳೂರು ನಗರದ ಬಿಟಿಎಂ ಬಡಾವಣೆಯ 2ನೇ ಹಂತದ 7ನೇ ಮುಖ್ಯರಸ್ತೆಯಲ್ಲಿರುವ ಟೀ ಶಾಪ್ ಬಳಿ ಯುವಕನೊಬ್ಬ `ಪಾಕಿಸ್ತಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದಾನೆ.
ಇದರಿಂದ ಅನುಮಾನಗೊಂಡ ಸಾರ್ವಜನಿಕರು ಮೈಕೋ ಲೇಔಟ್ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಸ್ಥಳಕ್ಕೆ ಬಂದ ಮೈಕೋ ಲೇಔಟ್ ಪೊಲೀಸರು ಆರೋಪಿ ಯುವಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.





