ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದು ಆತ್ಮಹತ್ಯೆ
ಮಂಡ್ಯ: ಕೌಟುಂಬಿಕ ಕಲಹದಿಂದ ಮನನೊಂದು ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಪತಿ ಕೆಲಸಕ್ಕೆ ತೆರಳಿದ್ದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಶರಣಾಗಿದ್ದಾನೆ





