ಉಮ್ರಾಯಾತ್ರೆಗೆ ತೆರಳಿದ್ದ ಬಂಟ್ವಾಳದ ನಿವಾಸಿ ಹೃದಯಾಘಾತದಿಂದ ಮೃತ್ಯು
ಸೌದಿ ಅರೇಬಿಯಾ; ಉಮ್ರಾಯಾತ್ರೆಗೆ ತೆರಳಿದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆ ನಿವಾಸಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಸೌದಿ ಅರೇಬಿಯಾದಲ್ಲಿ ನಡೆದಿದೆ.
ಬಂಟ್ವಾಳ ವಗ್ಗ ನಿವಾಸಿ ಉಸ್ಮಾನ್(67) ಮೃತರು.ಉಸ್ಮಾನ್ ಅವರು ಒಂದು ತಿಂಗಳ ಹಿಂದೆ ಸೌದಿ ಅರೇಬಿಯಾಗೆ ಉಮ್ರಾ ಯಾತ್ರೆಗೆ ತೆರಳಿದ್ದರು.
ಅಲ್ಲಿ ಅವರಿಗೆ ಹೃದಯಾಘಾತ ವಾಗಿತ್ತು.ಇ ಇದರಿಂದಾಗಿ ಕಳೆದ ಒಂದು ತಿಂಗಳಿನಿಂದ ಮೆಕ್ಕಾದ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.
ಗಂಭೀರ ಸ್ಥಿತಿಯಲ್ಲಿ ಕಿಂಗ್ ಫೈಸಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉಸ್ಮಾನ್ ಅವರು ನಿನ್ನೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಮೂಲಗಳ ಪ್ರಕಾರ ಅವರ ಅಂತ್ಯಕ್ರಿಯೆ ಕೂಡ ಅಲ್ಲಿಯೇ ನಡೆಯಲಿದೆ ಎನ್ನಲಾಗಿದೆ.





