“ಮೋದಿ ಹಟಾವೋ, ದೇಶ್ ಬಚಾವೋ” ಪೋಸ್ಟರ್: 8 ಮಂದಿಯ ಬಂಧನ
ಅಹಮದಾಬಾದ್: ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ ವಿರುದ್ಧ ಹಾಕಿದ್ದ ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದೆ.
ಅಹಮದಾಬಾದ್ ನಗರದ ವಿವಿಧೆಡೆ ‘ಮೋದಿ ಹಠಾವೋ ದೇಶ್ ಬಚಾವೋ’ ಪೋಸ್ಟರ್‌ಗಳನ್ನು ಹಾಕಿದ್ದ ಎಂಟು ಮಂದಿಯನ್ನು ಬಂಧಿಸಲಾಗಿದೆ.
ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ.
ಅಹಮದಾಬಾದ್ ಪೊಲೀಸರ ಪ್ರಕಾರ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಎಎಪಿಯ “ಮೋದಿ ಹಟಾವೋ, ದೇಶ್ ಬಚಾವೋ” ಅಭಿಯಾನವನ್ನು ದೇಶಾದ್ಯಂತ 11 ಭಾಷೆಗಳಲ್ಲಿ ಪ್ರಾರಂಭಿಸಲಾಯಿತು.
ಇಂಗ್ಲಿಷ್, ಹಿಂದಿ ಮತ್ತು ಉರ್ದು ಜೊತೆಗೆ, ಗುಜರಾತಿ, ಪಂಜಾಬಿ, ತೆಲುಗು, ಬೆಂಗಾಲಿ, ಒರಿಯಾ, ಕನ್ನಡ, ಮಲಯಾಳಂ ಮತ್ತು ಮರಾಠಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ.





